ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ ತೆಂಕಿಲದ ಸಮೃದ್ಧ್ ಆರ್ ಶೆಟ್ಟಿ ಹೊಯ್ಸಳ ಪ್ರಶಸ್ತಿಗೆ ಆಯ್ಕೆ.
ಕರ್ನಾಟಕ ಸರಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಪ್ರತಿವರ್ಷ ಕ್ರೀಡೆ, ಕಲೆ, ಸಾಂಸ್ಕೃತಿಕ, ಸಂಗೀತ, ವಿಜ್ಞಾನ ಕ್ಷೇತ್ರಗಳಲ್ಲಿ ಅಸಾಧಾರಣ ಸಾಧನೆ ಮಾಡಿದ ವಿದ್ಯಾರ್ಥಿ - ವಿದ್ಯಾರ್ಥಿನಿಯರಿಗೆ ಜಿಲ್ಲಾಮಟ್ಟದಲ್ಲಿ ‘ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ’ ಪ್ರಶಸ್ತಿಗಳನ್ನು ನೀಡುತ್ತಾ ಬರುತ್ತಿದೆ. ಸಾಧಕ ಬಾಲಕರಿಗೆ ಹೊಯ್ಸಳ ಪ್ರಶಸ್ತಿಯನ್ನು, ಸಾಧಕಿ ಬಾಲಕಿಯರಿಗೆ ಕೆಳದಿ ಚೆನ್ನಮ್ಮ ಪ್ರಶಸ್ತಿಯನ್ನು ನೀಡಲಾಗುತ್ತಿದೆ. ಪ್ರಸ್ತುತ ಶೈಕ್ಷಣಿಕ ವರ್ಷ 2025-26ರಲ್ಲಿ ಜಿಲ್ಲಾಮಟ್ಟದಲ್ಲಿ ವಿಜ್ಞಾನ ಕ್ಷೇತ್ರದಲ್ಲಿ ಮಾಡಿದ ವಿಶೇಷ ಸಾಧನೆಗಾಗಿ ಬಾಲಕರ ವಿಭಾಗದ ಹೊಯ್ಸಳ ಪ್ರಶಸ್ತಿಗೆ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ 9ನೇ ತರಗತಿಯ ವಿದ್ಯಾರ್ಥಿ ಸಮೃದ್ಧ್ ಆರ್ ಶೆಟ್ಟಿ ಆಯ್ಕೆ ಆಗಿರುತ್ತಾನೆ. ಪ್ರಶಸ್ತಿಯು ₹10,000 ನಗದು ಮೊತ್ತ, ಪ್ರಶಸ್ತಿ ಪತ್ರ ಹಾಗೂ ಫಲಕವನ್ನು ಒಳಗೊಂಡಿರುತ್ತದೆ. ಸಮೃದ್ಧ್ ಆರ್ ಶೆಟ್ಟಿಯು ವಿಜ್ಞಾನ ವಿಭಾಗದಲ್ಲಿ ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ ರಾಷ್ಟ್ರಮಟ್ಟದಲ್ಲಿಯೂ ಕೂಡ ಹಲವಾರು ಪ್ರಶಸ್ತಿಗಳನ್ನು ಪಡೆದಿರುವ ಸಾಧನೆಯನ್ನು ಮಾಡಿರುವ ಸಮೃದ್ಧ್ ಪ್ರೌಢಶಾಲಾ ಅಧ್ಯಾಪಕರುಗಳಾಗಿರುವ ಶ್ರೀ ರಾಮಚಂದ್ರ ಕೆ ಮತ್ತು ಶ್ರೀಮತಿ ಶೋಭಾ ದಂಪತಿ ಪುತ್ರ ಎಂದು ಶಾಲಾ ಮುಖ್ಯೋಪಾಧ್ಯಾಯರು ತಮ್ಮ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.