ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ, ತೆಂಕಿಲದ ವಿದ್ಯಾರ್ಥಿ ಅನ್ವಿತ್ ಎನ್ ವಿಭಾಗೀಯ ಮಟ್ಟದ ಗ್ರಾಮೀಣ ಐ.ಟಿ.ಕ್ವಿಜ್ ಗೆ ಆಯ್ಕೆ
ಕರ್ನಾಟಕ ರಾಜ್ಯ ಸರಕಾರ, ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ, ಉಪನಿರ್ದೇಶಕರ ಕಛೇರಿ (ಆಡಳಿತ) ಮಂಗಳೂರು, ಇದರ ಸಹಯೋಗದಲ್ಲಿ ದಿನಾಂಕ 07.09.2022ರಂದು ಜಿಲ್ಲಾ ಮಟ್ಟದ ಗ್ರಾಮೀಣ ಐ.ಟಿ.ಕ್ವಿಜ್ 2022 ಸ್ಪರ್ಧೆಯು ಮಂಗಳೂರಿನ ಕಪಿತಾನಿಯೋ ಪ್ರೌಢ ಶಾಲೆ, ಪಂಪ್‌ವೆಲ್ ಇಲ್ಲಿ ನಡೆಯಿತು. ಈ ಸ್ಪರ್ಧೆಯಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ, ತೆಂಕಿಲದ 10ನೇ ತರಗತಿಯ ವಿದ್ಯಾರ್ಥಿ ಅನ್ವಿತ್ ಎನ್, [ಶ್ರೀಪತಿ ಎನ್ ಮತ್ತು ವಿದ್ಯಾಲಕ್ಷ್ಮೀ.ಎ ದಂಪತಿ ಪುತ್ರ] ಇವರು ಭಾಗವಹಿಸಿ, ವಿಭಾಗೀಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ ಎಂದು ಶಾಲಾ ಮುಖ್ಯೋಪಾಧ್ಯಾಯರು ತಿಳಿಸಿರುತ್ತಾರೆ.