ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ ತೆಂಕಿಲದ ಸಮೃದ್ಧ್ ಆರ್ ಶೆಟ್ಟಿ INSPIRE Award 2024-25 ಸ್ಪರ್ಧೆಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ:
ಭಾರತ ಸರಕಾರದ ಅಧೀನದಲ್ಲಿರುವ ವಿಜ್ಞಾನ ಹಾಗೂ ತಂತ್ರಜ್ಞಾನ ಇಲಾಖೆಯು ಶಾಲಾ-ಕಾಲೇಜುಗಳಲ್ಲಿ ವಿಜ್ಞಾನ ಹಾಗೂ ತಂತ್ರಜ್ಞಾನದ ಪ್ರಗತಿಗೋಸ್ಕರ ಮತ್ತು ವಿದ್ಯಾರ್ಥಿಗಳು ತಮ್ಮ ಶೈಕ್ಷಣಿಕ ಪ್ರಕ್ರಿಯೆಯಲ್ಲಿ ವಿದ್ಯಾಭ್ಯಾಸದೊಂದಿಗೆ ವೈಜ್ಞಾನಿಕ ಆವಿಷ್ಕಾರಗಳಲ್ಲಿ ತೊಡಗಿಸಿಕೊಳ್ಳುವಂತೆ ಪ್ರೇರೇಪಿಸಲು ಪ್ರತಿ ವರ್ಷ INSPIRE Award MANAK ಸ್ಪರ್ಧೆಯನ್ನು ಆಯೋಜಿಸಲಾಗುತ್ತದೆ. 2024-25ನೇ ಸಾಲಿನ ಸ್ಪರ್ಧೆಯಲ್ಲಿ ತೆಂಕಿಲ ಇಲ್ಲಿನ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪ್ರಸ್ತುತ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಸಮೃಧ್ಧ್ ಆರ್ ಶೆಟ್ಟಿ ಮೊದಲ ಹಂತದ ಆನ್ ಲೈನ್ ಸ್ಪರ್ಧೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿ ಜಿಲ್ಲಾ ಹಂತಕ್ಕೆ ಆಯ್ಕೆಯಾಗಿರುತ್ತಾನೆ.
ಸಮೃದ್ಧ್ ಆರ್ ಶೆಟ್ಟಿ( ಶ್ರೀಮತಿ ಶೋಭಾ ಮತ್ತು ರಾಮಚಂದ್ರ ಕೆ ದಂಪತಿ ಪುತ್ರ) ‘The landmine detection robot for better world’ ಎಂಬ ಶೀರ್ಷಿಕೆಯೊಂದಿಗೆ ತನ್ನ ವಿಜ್ಞಾನ ಮಾದರಿಯನ್ನು ಪ್ರಸ್ತುತಪಡಿಸಿ ಜಿಲ್ಲಾ ಹಂತಕ್ಕೆ ಆಯ್ಕೆಯಾಗಿರುತ್ತಾನೆ ಎಂದು ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀ ಸತೀಶ್ ಕುಮಾರ್ ರೈ ಅವರು ತಮ್ಮ ಶಾಲಾ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.