ಮಾಸ್ಟರ್ಸ್ ಅಥ್ಲೆಟಿಕ್ಸ್ ನಲ್ಲಿ ದರ್ಬೆತ್ತಡ್ಕ ವೆಂಕಟೇಶ್ ಪ್ರಸಾದ್ ರಾಷ್ಟ್ರ ಮಟ್ಟಕ್ಕೆ ಆಯ್ಕೆ.
ಕೋಲಾರ ಜಿಲ್ಲಾ ಮಾಸ್ಟರ್ಸ್ ಅಥ್ಲೆಟಿಕ್ಸ್ ಅಸೋಸಿಯೇಷನ್ ವತಿಯಿಂದ ದಶಂಬರ 20 ಮತ್ತು 21ರಂದು ಕೋಲಾರದ ಸರ್ ಎಂ ವಿಶ್ವೇಶ್ವರಯ್ಯ ಸ್ಟೇಡಿಯಂನಲ್ಲಿ ನಡೆದ 44ನೇ ಕರ್ನಾಟಕ ರಾಜ್ಯ ಮಾಸ್ಟರ್ಸ್ ಅಥ್ಲೆಟಿಕ್ಸ್ ಚಾಂಪಿಯನ್‍ಶಿಪ್ ನಲ್ಲಿ ದರ್ಬೆತ್ತಡ್ಕ ನಿವಾಸಿ ವೆಂಕಟೇಶ್ ಪ್ರಸಾದ್ ( ದಿ.ರಾಮಚಂದ್ರ ಭಟ್ ಮತ್ತು ಶ್ರೀಮತಿ ಸರಸ್ವತಿ ಭಟ್ ದಂಪತಿಗಳ ಪುತ್ರ) ಇವರು 50ರ ವಯೋಮಾನದ ಪುರುಷರ ಹೈಜಂಪ್ ನಲ್ಲಿ ಚಿನ್ನದ ಪದಕ, 400ಮೀ ಹರ್ಡಲ್ಸ್ ನಲ್ಲಿ ಬೆಳ್ಳಿ ಪದಕ ಹಾಗೂ 100ಮೀ ಹರ್ಡಲ್ಸ್ ನಲ್ಲಿ ಕಂಚಿನ ಪದಕ ಗಳಿಸಿ, ಜನವರಿ 28ರಿಂದ ಫೆಬ್ರವರಿ 1ರ ವರೆಗೆ ತಿರುವನಂತಪುರದಲ್ಲಿ ನಡೆಯುವ 44ನೇ ರಾಷ್ಟ್ರ ಮಟ್ಟದ ಮಾಸ್ಟರ್ಸ್ ಕ್ರೀಡಾಕೂಟದಲ್ಲಿ ಭಾಗವಹಿಸಲಿದ್ದಾರೆ. ರಾಜ್ಯ ಮಟ್ಟದ ಕ್ರೀಡಾಕೂಟದಲ್ಲಿ ರಾಜ್ಯದ 22 ಜಿಲ್ಲೆಗಳ ಸುಮಾರು 750ಕ್ಕೂ ಅಧಿಕ ಕ್ರೀಡಾಪಟುಗಳು ಪಾಲ್ಗೊಂಡಿದ್ದರು. ಇವರು ದರ್ಬೆತ್ತಡ್ಕ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಪೆರ್ನಾಜೆ ಶ್ರೀ ಸೀತಾರಾಘವ ವಿದ್ಯಾಸಂಸ್ಥೆಗಳು ಮತ್ತು ಪುತ್ತೂರು ಸಂತ ಫಿಲೋಮಿನಾ ಪದವಿ ಕಾಲೇಜಿನ ಹಿರಿಯ ವಿದ್ಯಾರ್ಥಿಯಾಗಿದ್ದು, ಪ್ರಸ್ತುತ ಪುತ್ತೂರು ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸಂಸ್ಕ್ರತ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ ಎಂದು ಶಾಲಾ ಮುಖ್ಯೋಪಾಧ್ಯಾಯರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.