ಪ್ರತಿಭಾ ಕಾರಂಜಿ 2025: ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ನಿಲಿಷ್ಕ ರಾಜ್ಯಮಟ್ಟಕ್ಕೆ ಆಯ್ಕೆ
ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಗಳು, ದಕ್ಷಿಣ ಕನ್ನಡ ಜಿಲ್ಲಾ ಶಾಲಾ ಶಿಕ್ಷಣ ಇಲಾಖೆ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಮೂಡಬಿದಿರೆ ಮತ್ತು ಸಂತ ಥೋಮಸರ ಪ್ರೌಢ ಶಾಲೆ, ಅಲಂಗಾರು ಇವುಗಳ ಸಂಯುಕ್ತ ಆಶ್ರಯದಲ್ಲಿ ಡಿಸೆಂಬರ್ 22 ರಂದು ನಡೆಯಿತು.
ಚಿತ್ರಕಲಾ ಸ್ಪರ್ಧೆ ವಿಭಾಗದಲ್ಲಿ ಪುತ್ತೂರು ತಾಲೂಕಿಗೆ ಪ್ರಥಮ ಸ್ಥಾನಿಯಾಗಿ, ಪುತ್ತೂರು ತಾಲೂಕನ್ನು ಜಿಲ್ಲಾ ಮಟ್ಟದಲ್ಲಿ ಪ್ರತಿನಿಧಿಸಿದ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ 10ನೇ ತರಗತಿಯ ವಿದ್ಯಾರ್ಥಿನಿ ನಿಲಿಷ್ಕಾ.ಕೆ(ದಿನೇಶ್ ನಾಯ್ಕ ಮತ್ತು ಸ್ಮಿತಾಶ್ರೀ ದಂಪತಿಗಳ ಪುತ್ರಿ) ಪ್ರಥಮ ಸ್ಥಾನ ಪಡೆದುಕೊಂಡಿರುತ್ತಾಳೆ. ರಾಜ್ಯ ಮಟ್ಟದ ಸ್ಪರ್ಧೆಗಳಲ್ಲಿ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಲಿದ್ದಾಳೆ.
ಭರತನಾಟ್ಯ ಸ್ಪರ್ಧೆಯಲ್ಲಿ ಪುತ್ತೂರು ತಾಲೂಕನ್ನು ಪ್ರತಿನಿಧಿಸಿದ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ 10ನೇ ತರಗತಿಯ ಕೀರ್ತನಾ ವರ್ಮ (ಪ್ರತಾಪಸಿಂಹ ವರ್ಮ ಮತ್ತು ವೀಣಾ ಕುಮಾರಿ ದಂಪತಿಗಳ ಪುತ್ರಿ), ದ್ವಿತೀಯ ಸ್ಥಾನ ವನ್ನು ಪಡೆದುಕೊಂಡಿರುತ್ತಾಳೆ.