ಹಾಸನದಲ್ಲಿ ನಡೆದ ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ ವಂಶಿತಾ ಯಾನ್ ಭಾಗವಹಿಸಿದರು
ಜಿಲ್ಲಾಡಳಿತ ಹಾಗೂ ಶಾಲಾ ಶಿಕ್ಷಣ ಇಲಾಖೆ ಹಾಸನ ಜಿಲ್ಲೆ ಇವರ ಜಂಟಿ ಆಶ್ರಯದಲ್ಲಿ ದಿನಾಂಕ 20 ಮತ್ತು 21ರಂದು ಹಾಸನ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ ವಿದ್ಯಾರ್ಥಿನಿ ವಂಶಿತಾ ಯನ್ (ವಸಂತ ಕುಮಾರ್ ಹಾಗೂ ಸುಜಾತ ದಂಪತಿಗಳ ಪುತ್ರಿ) ಭಾಗವಹಿಸಿ ಉದ್ದ ಜಿಗಿತದಲ್ಲಿ 4.77mts ಜಿಗಿಯುದರ ಮೂಲಕ ರಾಜ್ಯಮಟ್ಟದಲ್ಲಿ ತೃತೀಯ ಸ್ಥಾನವನ್ನು ಪಡೆದಿರುತ್ತಾರೆ ಎಂದು ಶಾಲಾ ಮುಖ್ಯೋಪಾಧ್ಯಾಯರಾದ ಸತೀಶ್ ಕುಮಾರ್ ರೈ ತಿಳಿಸಿರುತ್ತಾರೆ.