ಸಮೂಹ ದೇಶಭಕ್ತಿಗೀತೆ ಸ್ಪರ್ಧೆಯಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಗೆ ಪ್ರಶಸ್ತಿ.
ಪುತ್ತೂರು: ಸಂಸ್ಕಾರ ಭಾರತಿ ದಕ್ಷಿಣ ಕನ್ನಡ ಜಿಲ್ಲೆ, ಪುತ್ತೂರು ಇನ್ನರ್ ವೀಲ್ ಕ್ಲಬ್ ಪುತ್ತೂರು, ಇದರ ಜಂಟಿ ಆಶ್ರಯದಲ್ಲಿ ಸಂಘ ಶತಾಬ್ದಿಯ ಪ್ರಯುಕ್ತ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ದೇಶಭಕ್ತಿ ಗೀತೆ ಸ್ಪರ್ಧೆಯನ್ನು ಜನವರಿ 25ರ ಆದಿತ್ಯವಾರದಂದು ನರೇಂದ್ರ ಪದವಿ ಪೂರ್ವ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಯಿತು. ಈ ಸ್ಪರ್ಧೆಯಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಪ್ರಾಥಮಿಕ ವಿಭಾಗದ ವಿದ್ಯಾರ್ಥಿಗಳಾದ ಸ್ತುತಿ ಜೈನ್ , ರಿತ್ವಿಕ್ ಆರ್ ರೈ, ಅನಘ ಹರಿಹರ ಭಟ್, ಅನಘ ಸರಸ್ವತಿ ,ಪೂರ್ವಿ ಭಟ್ ,ವೈಷ್ಣವಿ ಕೆ. ಭಾಗವಹಿಸಿ ಪ್ರಥಮ ಸ್ಥಾನವನ್ನು ಪಡೆಯುವುದರೊಂದಿಗೆ ಐದು ಸಾವಿರ ನಗದು ಮತ್ತು ಪ್ರಶಸ್ತಿಪತ್ರವನ್ನು ಪಡೆದಿರುತ್ತಾರೆ. ಹಾಗೆಯೇ ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳಾದ ನಿನಾದ , ಸಿರಿ ಹಿಳ್ಳೆಮನೆ ಕ್ಷಮಾ ಜೆ. ರೈ , ದೀಪ್ತಿ ಕುಬಣುರಾಯ, ಅನಿಕಾ ರಾವ್, ರಚನಾ ಬಾಯಾರ್ ದ್ವಿತೀಯ ಸ್ಥಾನವನ್ನು ಪಡೆದು 3000 ನಗದು ಮತ್ತು ಪ್ರಶಸ್ತಿ ಪತ್ರವನ್ನು ಪಡೆದಿರುತ್ತಾರೆ. ವಿಜೇತ ವಿದ್ಯಾರ್ಥಿಗಳಿಗೆ ಶಾಲಾ ಮುಖ್ಯ ಗುರುಗಳು ಮತ್ತು ಅಧ್ಯಾಪಕ ವೃಂದದವರು ಶುಭ ಹಾರೈಸಿ ಅಭಿನಂದಿಸಿದರು.