ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅಂತರಾಷ್ಟ್ರೀಯ ಮಾದಕ ವ್ಯಸನ ಮತ್ತು ಕಳ್ಳ ಸಾಗಾಣಿಕೆ ವಿರೋಧಿ ದಿನ.
ಅಂತರಾಷ್ಟ್ರೀಯ ಮಾದಕ ವ್ಯಸನ ಮತ್ತು ಕಳ್ಳ ಸಾಗಾಣಿಕೆ ವಿರೋಧಿ ದಿನ 2026ರ ಪ್ರಯುಕ್ತ ಜೂನ್ 30ರಂದು ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ನಡೆದ ನೇರ ಪ್ರಸಾರ ಕಾರ್ಯಕ್ರಮವನ್ನು ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ 9ನೇ ತರಗತಿ ವಿದ್ಯಾರ್ಥಿಗಳು ವೀಕ್ಷಿಸಿದರು. ಈ ಕಾರ್ಯಕ್ರಮವನ್ನು ಪುತ್ತೂರು ಸಂಚಾರ ಪೊಲೀಸ್ ಠಾಣೆಯ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಸುಹಾಸ್ ಆರ್, ಹೆಡ್ ಕಾನ್ಸ್ಟೇಬಲ್ ಯೋಗೇಶ್ ಡಿ.ಎಲ್ ಮತ್ತು ರವಿನಾರಾಯಣ ಜಿ ಇವರ ಉಪಸ್ಥಿತಿಯಲ್ಲಿ ವೀಕ್ಷಿಸಲಾಯಿತು. ಸನ್ಮಾನ್ಯ ಮುಖ್ಯಮಂತ್ರಿಗಳು ನಡೆಸಿಕೊಟ್ಟ ಮಾದಕ ವ್ಯಸನ ವಿರೋಧಿ ಪ್ರಮಾಣವವಚನವನ್ನು ವಿದ್ಯಾರ್ಥಿಗಳೆಲ್ಲರೂ ಪಡೆದುಕೊಂಡರು.
ಕಾರ್ಯಕ್ರಮದಲ್ಲಿ ಹಿರಿಯ ದೈಹಿಕ ಶಿಕ್ಷಕ ಭಾಸ್ಕರ್ ಗೌಡ ಹಾಗೂ ತರಗತಿ ಶಿಕ್ಷಕರು ಉಪಸ್ಥಿತರಿದ್ದರು ಎಂಬುದಾಗಿ ಶಾಲಾ ಮುಖ್ಯೋಪಾಧ್ಯಾಯರು ಶ್ರೀ ಸತೀಶ್ ಕುಮಾರ್ ರೈ ಅವರು ತಿಳಿಸಿರುತ್ತಾರೆ.