ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಉಪನಿರ್ದೇಶಕರು ಶಾಲಾ ಶಿಕ್ಷಣ ಇಲಾಖೆ, ದಕ್ಷಿಣ ಕನ್ನಡ ಜಿಲ್ಲೆ, ಮಂಗಳೂರು.
ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ 14/17 ರ ವಯೋಮಿತಿಯ ಪ್ರಾಥಮಿಕ / ಪ್ರೌಢಶಾಲಾ ಬಾಲಕ / ಬಾಲಕಿಯರ ಚೆಸ್ ಪಂದ್ಯಾವಳಿಯು ಇಂದ್ರಪ್ರಸ್ಥ ವಿದ್ಯಾಲಯ ಉಪ್ಪಿನಂಗಡಿ ಯಲ್ಲಿ ದಿನಾಂಕ 28.08.2026 ರಂದು ನಡೆದಿದ್ದು, ವಿವೇಕಾನಂದ ಆoಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿಯರು ಬಹುಮಾನವನ್ನು ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆ ಆಗಿರುತ್ತಾರೆ.
14 ರ ವಯೋಮಾನದ ಬಾಲಕಿಯರ ವಿಭಾಗದಲ್ಲಿ ಕೃತಿಕ ಎಂ 8 ನೇ ತರಗತಿ ( ರಮೇಶ ಹಾಗೂ ರಾಜೇಶ್ವರಿ ದಂಪತಿಯ ಪುತ್ರಿ ) ಆರುಷಿ ರೈ 6 ನೇ ತರಗತಿ ( ನವೀನ್ ಪ್ರಸಾದ್ ರೈ ಹಾಗೂ ಭವ್ಯ ರೈ ದಂಪತಿಯ ಪುತ್ರಿ ಇವರು ಸೆಪ್ಟೆಂಬರ್ ತಿಂಗಳಿನಲ್ಲಿ ಕೊಪ್ಪಳದಲ್ಲಿ ನಡೆಯುವ ರಾಜ್ಯಮಟ್ಟದ ಚೆಸ್ ಪಂದ್ಯಾಟಕ್ಕೆ ಆಯ್ಕೆ ಆಗಿರುತ್ತಾರೆ ಎಂದು ಶಾಲ ಮುಖ್ಯೋಪಾಧ್ಯಾಯರು ತಿಳಿಸಿರುತ್ತಾರೆ.