ಕರ್ನಾಟಕ ರಾಜ್ಯ ಮುಕ್ತ ಫಿಡೆ ರೇಟೆಡ್ ಚೆಸ್ ಟೂರ್ನಿ
ಪುತ್ತೂರು ತಾಲೂಕು ಚೆಸ್ ಅಸೋಸಿಯೇಷನ್ (ರಿ) ಮತ್ತು ಒಕ್ಕಲಿಗ ಗೌಡ ಸೇವಾ ಸಂಘ(ರಿ) ಇವರ ಜಂಟಿ ಆಶ್ರಯದಲ್ಲಿ ತೆಂಕಿಲ ಒಕ್ಕಲಿಗ ಸಭಾಭವನದಲ್ಲಿ ಜೂನ್ 24ರಿಂದ 26ರ ವರೆಗೆ ನಡೆದ 17ರ ವಯೋಮಾನದ ಕರ್ನಾಟಕ ರಾಜ್ಯ ಮುಕ್ತ ಫಿಡೆ ರೇಟೆಡ್ ಚೆಸ್ ಟೂರ್ನಿಯಲ್ಲಿ 162 ಸ್ಪರ್ಧಿಗಳು ಭಾಗವಹಿಸಿದ್ದು, ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ 10ನೇ ತರಗತಿಯ ವಿದ್ಯಾರ್ಥಿ ಧನುಷ್ ರಾಮ್. ಎಂ ( ಶ್ರೀ ದಿನೇಶ್ ಪ್ರಸನ್ನ ಮತ್ತು ಶ್ರೀಮತಿ ಉಮಾ.ಡಿ. ಪ್ರಸನ್ನ ಇವರ ಪುತ್ರ) ಪ್ರಥಮ ಸ್ಥಾನದೊಂದಿಗೆ ಚಾಂಪಿಯನ್ ಆಗಿ ಹೊರಹೊಮ್ಮಿದ್ದು, ಜುಲೈ ತಿಂಗಳ 1ರಿಂದ 9ರವರೆಗೆ ಒಡಿಶಾದ ಭುವನೇಶ್ವರದಲ್ಲಿ ನಡೆಯುವ ರಾಷ್ಟ್ರ ಮಟ್ಟದ ಸ್ಪರ್ಧೆಯಲ್ಲಿ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಲಿದ್ದಾನೆ.