ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ‘ಗಣಹೋಮ’ ಮತ್ತು ಶಾಲಾ ಪ್ರಾರಂಭೋತ್ಸವ
ಮೇ 16ರಂದು ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವದ ಪ್ರಯುಕ್ತ ಬೆಳಿಗ್ಗೆ ‘ಗಣಹೋಮ’ವು ಪುರೋಹಿತ ಶ್ರೀಮಾನ್ ರಾಜೇಶ್ ಭಟ್ ಇವರ ನೇತೃತ್ವದಲ್ಲಿ ನಡೆಯಿತು. ಪುರೋಹಿತ ಶ್ರೀಮಾನ್ ರಾಜೇಶ್ ಭಟ್ ಇವರು ಪೂಜಾಕಾರ್ಯ ನಿರ್ವಹಿಸಿ ಎಲ್ಲರಿಗೂ ಶುಭ ಹಾರೈಸಿದರು.
ಶಾಲಾ ಆಡಳಿತ ಸದಸ್ಯ ಶ್ರೀ ಚಂದ್ರಶೇಖರ್‌ರವರು ಹವನದಕರ್ತೃತ್ವ ವಹಿಸಿದ್ದರು. ಆಡಳಿತ ಮಂಡಳಿ ಸಂಚಾಲಕರಾದ ಶ್ರೀ ರವಿನಾರಾಯಣ.ಎಂ, ಶಾಲಾ ಮುಖ್ಯೋಪಾಧ್ಯಾಯರು, ಶಾಲಾ ಶಿಕ್ಷಕ ವೃಂದದವರು, ಪೋಷಕರ ಬಂಧುಗಳು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.