Cancel Preloader
  • Call: 08251 – 232015
  • Email: school.vem@gmail.com
Vivekananda English Medium School
  • Home
  • About
    • About Us
    • History
    • Message
    • Management
  • Academics
    • Prospectus
    • Rules & Regulations
  • Facilities
  • News & Events
  • Gallery
  • Alumni
  • Contact
Vivekananda English Medium School
  • Home
  • About
    • About Us
    • History
    • Message
    • Management
  • Academics
    • Prospectus
    • Rules & Regulations
  • Facilities
  • News & Events
  • Gallery
  • Alumni
  • Contact
  • 08251 – 232015
  • 09449 - 678333
  • Email: school.vem@gmail.com

News & Events

  • Home
  • News & Events

ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡದಿಂದ ವಿದ್ಯಾರ್ಥಿಗಳಿಗೆ ಪ್ರಾತ್ಯಕ್ಷಿಕೆ ಹಾಗೂ ಕಾರ್ಯಾಗಾರ.

Gallery Image

ಪುತ್ತೂರಿನ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ದಿನಾಂಕ 11-06-2026 ರಂದು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (NDRF) ವತಿಯಿಂದ ವಿದ್ಯಾರ್ಥಿಗಳಿಗಾಗಿ ಪ್ರಾತ್ಯಕ್ಷಿಕೆ ಹಾಗೂ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮವು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ ಕಮಾಂಡರ್ ಶ್ರೀ ಶಾಂತಿಲಾಲ್ ಜಟಿಯ ಹಾಗೂ ಸಬ್ ಇನ್ಸ್‌ಪೆಕ್ಟರ್ ಶ್ರೀ ಸುಭಾಷ್ ಶಿಂಡೆ ಅವರ ನೇತೃತ್ವದಲ್ಲಿ ನಡೆಯಿತು. ಶ್ರೀ ರಾಘೇ ರಾಮಕೃಷ್ಣ, ಶ್ರೀ ಬಾಲಕೃಷ್ಣ ಹಾಗೂ ಶ್ರೀ ಶ್ರೀನಿವಾಸಲು ಅವರು ಕಾರ್ಯಕ್ರಮವನ್ನು ನಿರ್ವಹಿಸಿದರು.

ಈ ಕಾರ್ಯಾಗಾರದಲ್ಲಿ ಪ್ರಥಮ ಚಿಕಿತ್ಸೆ, ಗಾಯಾಳುಗಳ ರಕ್ಷಣೆ, ನೈಸರ್ಗಿಕ ವಿಕೋಪಗಳ ಸಂದರ್ಭದಲ್ಲಿ ಕೈಗೊಳ್ಳಬೇಕಾದ ರಕ್ಷಣಾ ಕ್ರಮಗಳು, ಗಾಯಾಳುಗಳಿಗೆ ನೀಡಬೇಕಾದ ತುರ್ತು ಚಿಕಿತ್ಸೆ, ಹೃದಯಾಘಾತ ಸಂಭವಿಸಿದ ಸಂದರ್ಭದಲ್ಲಿ ಅನುಸರಿಸಬೇಕಾದ ಅಗತ್ಯ ಕ್ರಮಗಳು ಸೇರಿದಂತೆ ವಿವಿಧ ವಿಪತ್ತು ನಿರ್ವಹಣಾ ವಿಷಯಗಳ ಕುರಿತು ಅತ್ಯಂತ ಮನೋಜ್ಞ ಹಾಗೂ ಪ್ರಾಯೋಗಿಕ ಪ್ರಾತ್ಯಕ್ಷಿಕೆಗಳನ್ನು ನೀಡಲಾಯಿತು. ವಿದ್ಯಾರ್ಥಿಗಳಿಗೆ ವಿವಿಧ ತುರ್ತು ಪರಿಸ್ಥಿತಿಗಳನ್ನು ಸಮರ್ಥವಾಗಿ ಎದುರಿಸುವ ವಿಧಾನಗಳ ಕುರಿತು ವಿವರವಾದ ಮಾಹಿತಿಯನ್ನು ಒದಗಿಸಲಾಯಿತು. ಈ ಸಂದರ್ಭದಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಖಜಾಂಜಿಗಳಾದ ಶ್ರೀ ಕೃಷ್ಣ ಮೋಹನ್ ಪಿ.ಎಸ್. ನರೇಂದ್ರ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರು, ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯ ಗುರುಗಳು, ವಿವೇಕಾನಂದ ಕನ್ನಡ ಮಾಧ್ಯಮ ಶಾಲೆ, ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ ಮತ್ತು, ನರೇಂದ್ರ ಪದವಿ ಪೂರ್ವ ಕಾಲೇಜಿನ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದು ಕಾರ್ಯಾಗಾರದ ಪ್ರಯೋಜನವನ್ನು ಪಡೆದುಕೊಂಡರು.

ವಿವೇಕಾನಂದ ಶಿಕ್ಷಣ ಸಂಸ್ಥೆಗಳ ಸುಮಾರು 1550 ವಿದ್ಯಾರ್ಥಿಗಳು ಈ ಕಾರ್ಯಾಗಾರದಲ್ಲಿ ಭಾಗವಹಿಸಿ, ವಿಪತ್ತು ನಿರ್ವಹಣೆ, ಪ್ರಥಮ ಚಿಕಿತ್ಸೆ ಹಾಗೂ ತುರ್ತು ರಕ್ಷಣಾ ಕಾರ್ಯಗಳ ಕುರಿತು ಅಮೂಲ್ಯವಾದ ಪ್ರಾಯೋಗಿಕ ಜ್ಞಾನವನ್ನು ಪಡೆದುಕೊಂಡರು. ವಿದ್ಯಾರ್ಥಿಗಳ ಸಕ್ರಿಯ ಭಾಗವಹಿಸುವಿಕೆಯಿಂದ ಕಾರ್ಯಕ್ರಮವು ಅತ್ಯಂತ ಯಶಸ್ವಿಯಾಗಿ ನಡೆಯಿತು.

ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ ಕಮಾಂಡರ್ ಶ್ರೀ ಶಾಂತಿಲಾಲ್ ಜಟಿಯ ಹಾಗೂ ಸಬ್ ಇನ್ಸ್‌ಪೆಕ್ಟರ್ ಶ್ರೀ ಸುಭಾಷ್ ಶಿಂಡೆ ಅವರ ತಂಡದವರು ನಡೆಸಿಕೊಟ್ಟ ಈ ಪ್ರಾತ್ಯಕ್ಷಿಕೆ ಹಾಗೂ ಕಾರ್ಯಾಗಾರವು ಅತ್ಯಂತ ಪರಿಣಾಮಕಾರಿಯಾಗಿ ಮೂಡಿಬಂದಿತು. ವಿಪತ್ತು ಸಂಭವಿಸಿದ ಸಂದರ್ಭಗಳಲ್ಲಿ ಆತ್ಮವಿಶ್ವಾಸದಿಂದ ಕಾರ್ಯನಿರ್ವಹಿಸಲು ಅಗತ್ಯವಾದ ಕೌಶಲ್ಯಗಳನ್ನು ವಿದ್ಯಾರ್ಥಿಗಳು ಈ ಕಾರ್ಯಾಗಾರದ ಮೂಲಕ ಕಲಿತುಕೊಂಡರು.

ಕಾರ್ಯಕ್ರಮದ ಸಂಪೂರ್ಣ ಜವಾಬ್ದಾರಿಯನ್ನು ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಎನ್‌ಸಿಸಿ (NCC) ಹಾಗೂ ಸ್ಕೌಟ್-ಗೈಡ್ಸ್ ತಂಡವು ವಹಿಸಿಕೊಂಡಿತ್ತು. ಕಾರ್ಯಕ್ರಮವನ್ನು ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕಿ ಶ್ರೀಮತಿ ಕವಿತಾ ಕೆ. ಜಿ. ಅವರು ನಿರೂಪಿಸಿದರು.

ಈ ಕಾರ್ಯಾಗಾರವು ವಿದ್ಯಾರ್ಥಿಗಳಲ್ಲಿ ಸೇವಾ ಮನೋಭಾವ, ಸಾಮಾಜಿಕ ಹೊಣೆಗಾರಿಕೆ, ವಿಪತ್ತು ನಿರ್ವಹಣಾ ಕೌಶಲ್ಯ ಹಾಗೂ ತುರ್ತು ಸಂದರ್ಭಗಳಲ್ಲಿ ಕಾರ್ಯನಿರ್ವಹಿಸುವ ಆತ್ಮವಿಶ್ವಾಸವನ್ನು ಬೆಳೆಸುವಲ್ಲಿ ಬಹಳ ಮಹತ್ವದಾಗಿದೆ ಈ ಸಮಾಜಮುಖಿ ಕಾರ್ಯಕ್ರಮವನ್ನು ನಡೆಸಿಕೊಟ್ಟ ಅಧಿಕಾರಿ ವರ್ಗದವರನ್ನು ಶಾಲಾ ವತಿಯಿಂದ ಅಭಿನಂದಿಸಲಾಯಿತು.

Vivekananda English Medium School

VIVEKANANDA ENGLISH MEDIUM SCHOOL
A unit of Vivekananda Vidhyavardhaka Sangha(R.)
VIVEKANAGARA, TENKILA, PUTTUR –574201

Links

  • Home
  • About Us
  • Management
  • Contact Us

Links

  • Facilities
  • & News Events
  • Gallery
  • Alumni

Contacts

  • Call:08251 – 232015
  • Call:09449 - 678333
  • Email:school.vem@gmail.com

Copyright 2022 Vivekananda English Medium School Designed By Websoft - Mangalore. All Rights Reserved