ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ರಾಷ್ಟ್ರಮಟ್ಟಕ್ಕೆ ಆಯ್ಕೆ.
ವಿದ್ಯಾಭಾರತಿ ಕರ್ನಾಟಕ ಮತ್ತು ರಾಷ್ಟ್ರೋತ್ಥಾನ ವಿದ್ಯಾ ಕೇಂದ್ರ ಬೆಂಗಳೂರು ಇವುಗಳ ಸಂಯುಕ್ತ ಆಶ್ರಯದಲ್ಲಿ ವಿದ್ಯಾಭಾರತಿ ರಾಜ್ಯಮಟ್ಟದ ಕರಾಟೆ ಸ್ಪರ್ಧೆಯು ಆಗಸ್ಟ್ 29ರಂದು ಬೆಂಗಳೂರಿನಲ್ಲಿ ನಡೆಯಿತು. ಈ ಪಂದ್ಯಕೂಟದಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
14 ರ ವಯೋಮಾನದ ಬಾಲಕರ ವಿಭಾಗದಲ್ಲಿ ಧನುಷ್ ಟಿ. ಪಿ (ಪುರಂದರ ಗೌಡ ಟಿ ಮತ್ತು ರಮ್ಯ ದಂಪತಿಗಳ ಪುತ್ರ) ಪ್ರಥಮ ಸ್ಥಾನ. ಸಂಹಿತ್ ಸಿ ಅಲರ್ (ಚಂದ್ರಹಾಸ ಅಲರ್ ಮತ್ತು ಯಾಮಿನಿ ದಂಪತಿಗಳ ಪುತ್ರ) ಪ್ರಥಮ ಸ್ಥಾನವನ್ನು ಪಡೆದುಕೊಂಡಿರುತ್ತಾರೆ.
17 ರ ವಯೋಮಾನದ ಬಾಲಕಿಯರ ವಿಭಾಗದಲ್ಲಿ ಅಭಿಜ್ಞಾ ಶಾಂಭವಿ (ಸುಧೀರ್ ಬಿ .ಎಸ್ ಮತ್ತು ಲತಾ ಶಾಂಭವಿ ದಂಪತಿಗಳ ಪುತ್ರಿ) ಪ್ರಥಮ ಸ್ಥಾನ. ಮಹತಿ ಎಂ (ಶಿವರಂಜನ್ ಮತ್ತು ಲಾವಣ್ಯ ಭಟ್ ದಂಪತಿಗಳ ಪುತ್ರಿ) ಪ್ರಥಮ ಸ್ಥಾನ ಪಡೆದುಕೊಂಡಿರುತ್ತಾರೆ. ನವೆಂಬರ್ 21,22 ,23 ಮತ್ತು 24ರಂದು ಮಧ್ಯ ಪ್ರದೇಶದಲ್ಲಿ ನಡೆಯುವ ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆಂದು ಶಾಲಾ ಮುಖ್ಯೋಪಾಧ್ಯಾಯರು ತಿಳಿಸಿರುತ್ತಾರೆ