ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ
ಪುತ್ತೂರು ವಲಯ ಮಟ್ಟದ ಕ್ರೀಡಾಕೂಟವು ದಿನಾಂಕ 23, ಮತ್ತು 24 ಅಕ್ಟೋಬರ್ 2025 ರಂದು ವಿವೇಕಾನಂದ ಶಾಲಾ ಕ್ರೀಡಾಂಗಣ ತೆಂಕಿಲದಲ್ಲಿ ನಡೆದಿದ್ದು ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ ವಿದ್ಯಾರ್ಥಿಗಳು ಭಾಗವಹಿಸಿ ಹಲವು ಬಹುಮಾನಗಳನ್ನು ಪಡೆದಿರುತ್ತಾರೆ. 14ರ ವಯೋಮಾನದ ಬಾಲಕರ ವಿಭಾಗದಲ್ಲಿ ರಾಹುಲ್ ಕೆ 600 ಮೀಟರ್ ಓಟದಲ್ಲಿ ಪ್ರಥಮ ಮತ್ತು 400 ಮೀಟರ್ ಓಟದಲ್ಲಿ ಪ್ರಥಮ ಸ್ಥಾನವನ್ನು ಹಾಗೂ 4x100 ಮೀಟರ್ರಿಲೇ ಓಟದಲ್ಲಿ ಯಲ್ಲಿ ದ್ವಿತೀಯ ಸ್ಥಾನವನ್ನು ಪಡೆದಿರುತ್ತಾರೆ ಸರ್ವಿನ್ ಸಿ .200 ಮೀಟರ್ ಓಟದಲ್ಲಿ ದ್ವಿತೀಯ ಸ್ಥಾನವನ್ನು ಪಡೆದಿರುತ್ತಾರೆ. ಮನೀಶ್ ಯು. 100 ಮೀಟರ್ ಓಟದಲ್ಲಿ ದ್ವಿತೀಯ ಸ್ಥಾನವನ್ನು ಪಡೆದಿರುತ್ತಾರೆ ಹಾಗೂ 4x100 ಮೀಟರ್ ರಿಲೆ ಯಲ್ಲಿ ದ್ವಿತೀಯ ಸ್ಥಾನವನ್ನು ಪಡೆದಿರುತ್ತಾರೆ. ರಂಜಿತ್ 4x100 ಮೀಟರ್ ರಿಲೆಯಲ್ಲಿ ದ್ವಿತೀಯ ಸ್ಥಾನವನ್ನು ಪಡೆದಿರುತ್ತಾರೆ. ಸಾಕ್ಷಿನ್ ಆರ್ ರಿಲೆಯಲ್ಲಿ ದ್ವಿತೀಯ ಸ್ಥಾನವನ್ನು ಪಡೆದಿರುತ್ತಾರೆ
14ರ ವಯೋಮಾನದ ಬಾಲಕಿಯರ ವಿಭಾಗದಲ್ಲಿ ಆತ್ಮಿ.ಕೆ.ಎಲ್ 100 ಮೀಟರ್ ಓಟದಲ್ಲಿ ಪ್ರಥಮ 200 ಮೀಟರ್ ಓಟದಲ್ಲಿ ಪ್ರಥಮ 400 ಮೀಟರ್ ಓಟದಲ್ಲಿ ಪ್ರಥಮ ಹಾಗೂ 4x100 ಮೀಟರ್ ರಿಲೆಯಲ್ಲಿ ಪ್ರಥಮ ಸ್ಥಾನವನ್ನು ಪಡೆದು 14ರ ವಯೋಮಾನದ ಬಾಲಕಿಯರ ವಿಭಾಗದ ವೈಯಕ್ತಿಕ ಚಾಂಪಿಯನ್ ಆಗಿದ್ದಾರೆ ವಂಶಿತ.ಎನ್ 600 ಮೀಟರ್ ಓಟದಲ್ಲಿ ಪ್ರಥಮ ಉದ್ದ ಜಿಗಿತದಲ್ಲಿ ಪ್ರಥಮ ಹಾಗೂ 4x100 ಮೀಟರ್ ರಿಲೆಯಲ್ಲಿ ಪ್ರಥಮ ಸ್ಥಾನವನ್ನು ಪಡೆದಿರುತ್ತಾರೆ ಸಾನ್ವಿ ಆನಂದ್ ಎತ್ತರ ಜಿಗಿತದಲ್ಲಿ ತೃತೀಯ ಸ್ಥಾನ ಹಾಗೂ 4x100 ಮೀಟರ್ ರಿಲೆ ಯಲ್ಲಿ ಪ್ರಥಮ ಸ್ಥಾನವನ್ನು ಪಡೆದಿರುತ್ತಾರೆ ದಿಶಾ ಬಿ. 100 ಮೀಟರ್ ಓಟದಲ್ಲಿ ದ್ವಿತೀಯ ಸ್ಥಾನ 200 ಮೀಟರ್ ಓಟದಲ್ಲಿ ದ್ವಿತೀಯ ಸ್ಥಾನ ಪಡೆದಿರುತ್ತಾರೆ ಹಾಗೂ 4x100 ಮೀಟರ್ ರಿಲೆಯಲ್ಲಿ ಪ್ರಥಮ ಸ್ಥಾನವನ್ನು ಪಡೆದಿರುತ್ತಾರೆ ಮನ್ವಿ. ಪೀ. ರೈ ತೃತೀಯ ಸ್ಥಾನವನ್ನು ಪಡೆದಿರುತ್ತಾರೆ. ನಿಶ್ಮಾ .ಕೆ. ಚಕ್ರ ಎಸೆತದಲ್ಲಿ ಪ್ರಥಮ ಸ್ಥಾನವನ್ನು ಪಡೆದಿರುತ್ತಾರೆ. 14ರ ವಯೋಮಾನದ ಬಾಲಕಿಯರ ವಿಭಾಗದ ಸಮಗ್ರ ಚಾಂಪಿಯನ್ ಆಗಿರುತ್ತಾರೆ.
17ರ ವಯೋಮಾನದ ಬಾಲಕರ ವಿಭಾಗದಲ್ಲಿ ವೈಭವ್ ಕಾಮತ್ ತ್ರಿವಿಧ ಜಿಗಿತದಲ್ಲಿ ಪ್ರಥಮ ಸ್ಥಾನವನ್ನು ಪಡೆದಿರುತ್ತಾರೆ. 17ರ ವಯೋಮಾನದ ಬಾಲಕಿಯರ ವಿಭಾಗದಲ್ಲಿ ದಿವಿಜ್ಞ ಯು ಎಸ್ 100 ಮೀಟರ್ ಓಟದಲ್ಲಿ ಪ್ರಥಮ ಸ್ಥಾನ 200 m ಓಟದಲ್ಲಿ ಪ್ರಥಮ ಸ್ಥಾನ ಹಾಗೂ 400 ಮೀಟರ್ ಓಟದಲ್ಲಿ ಪ್ರಥಮ ಸ್ಥಾನವನ್ನು ಹಾಗೂ 4x100 ಮೀಟರ್ ರಿಲೆ ದ್ವಿತೀಯ ಹಾಗೂ 4x400 ಮೀಟರ್ ರಿಲೇಯಲ್ಲಿ ಪ್ರಥಮ ಸ್ಥಾನವನ್ನು ಪಡೆದು 17ರ ವಯೋಮಾನದ ಬಾಲಕಿಯರ ವಿಭಾಗದ ವೈಯಕ್ತಿಕ ಚಾಂಪಿಯನ್ ಆಗಿರುತ್ತಾರೆ. ಶ್ರೀರಕ್ಷ.ಕೆ 800 ಮೀಟರ್ ಓಟದಲ್ಲಿ ದ್ವಿತೀಯ ಸ್ಥಾನ ಹಾಗೂ 1500 ಮೀಟರ್ ಓಟದಲ್ಲಿ ದ್ವಿತೀಯ ಸ್ಥಾನವನ್ನು ಪಡೆದು 4x400 ಮೀಟರ್ ಓಟದಲ್ಲಿ ಪ್ರಥಮ ಸ್ಥಾನವನ್ನು ಪಡೆದಿರುತ್ತಾರೆ. ಚಿಂತನ ಸಿ ತ್ರಿವಿಧ ಜಿಗಿತದಲ್ಲಿ ದ್ವಿತೀಯ ಸ್ಥಾನವನ್ನು ಪಡೆದಿರುತ್ತಾರೆ ಹಾಗೂ 4x100 ಮೀಟರ್ ಮೀಟರ್ ರಿಲೇಯಲ್ಲಿ ದ್ವಿತೀಯ ಸ್ಥಾನವನ್ನು ಪಡೆದಿರುತ್ತಾರೆ. ನಿಧಿಶ್ರೀ .ಕೆ ಉದ್ಧ ಜಿಗಿತದಲ್ಲಿ ದ್ವಿತೀಯ ಸ್ಥಾನವನ್ನು ಹಾಗೂ 4x100 ಮೀಟರ್ ಓಟದಲ್ಲಿ ದ್ವಿತೀಯ ಸ್ಥಾನವನ್ನು ಪಡೆದಿರುತ್ತಾರೆ ಕ್ಷಮಾ ಜೆ ರೈ ತ್ರಿವಿಧ ಜಿಗಿತದಲ್ಲಿ ತೃತೀಯ ಸ್ಥಾನವನ್ನು ಹಾಗೂ ಎತ್ತರ ಜಿಗಿತದಲ್ಲಿ ದ್ವಿತೀಯ ಸ್ಥಾನವನ್ನು ಪಡೆದು 4x100 ಮೀಟರ್ ರಿಲೇಯಲ್ಲಿ ದ್ವಿತೀಯ ಸ್ಥಾನವನ್ನು ಹಾಗೂ 4x400 ಮೀಟರ್ ರಿಲೆಯಲ್ಲಿ ಪ್ರಥಮ ಸ್ಥಾನವನ್ನು ಪಡೆದಿರುತ್ತಾರೆ. 17ರ ವಯೋಮಾನದ ಬಾಲಕಿಯರ ವಿಭಾಗದ ಸಮಗ್ರ ದ್ವಿತೀಯ ಚಾಂಪಿಯನ್ ಆಗಿರುತ್ತಾರೆ.
ಪ್ರಥಮ ಹಾಗೂ ದ್ವಿತೀಯ ಸ್ಥಾನ ಪಡೆದ ವಿದ್ಯಾರ್ಥಿಗಳು ದಿನಾಂಕ 08-11-2025ರಂದು ಬೆಟ್ಟಂಪಾಡಿಯಲ್ಲಿ ನಡೆಯಲಿರುವ ತಾಲೂಕು ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ ಎಂದು ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀ ಸತೀಶ್ ಕುಮಾರ್ ರೈ ಇವರು ತಿಳಿಸಿರುತ್ತಾರೆ.