ವಿಕಸಿತ ಭಾರತ- 2047 ಜಿಲ್ಲಾ ಮಟ್ಟದ ಭಾಷಣ ಸ್ಪರ್ಧೆಯಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿನಿ ಸಾನ್ವಿಗೆ ದ್ವಿತೀಯ ಬಹುಮಾನ.
ಭಾರತದ ಪ್ರಧಾನಿ ಶ್ರೀ ನರೇಂದ್ರ ಮೋದಿಯವರ ಸಾರ್ವಜನಿಕ ಸೇವೆ ಮತ್ತು ಸಮರ್ಪಣೆಯ 25ನೇ ವರ್ಷಾಚರರಣೆ “ಸೇವಾ ಸಂಕಲ್ಪ ಅಭಿಯಾನ”ದ ಪ್ರಯುಕ್ತ ನಡೆದ ವಿಕಸಿತ ಭಾರತ- 2047 ಜಿಲ್ಲಾ ಮಟ್ಟದ ಭಾಷಣ ಸ್ಪರ್ಧೆಯು ಸಂಘನಿಕೇತನ ಮಂಗಳೂರಿನಲ್ಲಿ ನಡೆದಿದ್ದು ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ 10ನೇ ತರಗತಿಯ ವಿದ್ಯಾರ್ಥಿನಿ ಸಾನ್ವಿ ಎಸ್ (ಸಂತೋಷ್ ಕುಮಾರ್ ಹಾಗೂ ಸೌಮ್ಯಶ್ರೀ ದಂಪತಿಗಳ ಪುತ್ರಿ) ದ್ವಿತೀಯ ಬಹುಮಾನ ಗಳಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ ಎಂದು ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀ ಸತೀಶ್ ಕುಮಾರ್ ರೈ ತಿಳಿಸಿರುತ್ತಾರೆ